Friday, July 24, 2026
Join WhatsApp Group
HomeCrimeಕಂಟೇನರ್ ಲಾರಿ-ಬೈಕ್‌ ಡಿಕ್ಕಿ: ವ್ಯಕ್ತಿಯ ಬದುಕು ಅಂತ್ಯ

ಕಂಟೇನರ್ ಲಾರಿ-ಬೈಕ್‌ ಡಿಕ್ಕಿ: ವ್ಯಕ್ತಿಯ ಬದುಕು ಅಂತ್ಯ

ಯಲ್ಲಾಪುರ: ತಾಲೂಕಿನ ಇಡಗುಂದಿ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹರೀಶ ಸಿದ್ದಿ ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ ಮೂಲದ ಧರ್ಮೇಂದ್ರ ಕುಮಾರ ಎಂಬವರು ಅಂಕೋಲಾದಿಂದ ಯಲ್ಲಾಪುರ ಕಡೆಗೆ ಕಂಟೇನರ್ ಲಾರಿ ಚಲಾಯಿಸಿಕೊಂಡು ಬರುತ್ತಿದ್ದರು. ಇಡಗುಂದಿ ಸಮೀಪ ಲಾರಿ ವೇಗವಾಗಿ ಸಂಚರಿಸುತ್ತಿದ್ದ ವೇಳೆ ಸೋನಾರಕೇರಿಯ ಸುರೇಶ ಸಿದ್ದಿ ಅವರ ಬೈಕನ್ನು ಹಿಂದಿಕ್ಕಿದೆ. ಬಳಿಕವೂ ಅದೇ ವೇಗದಲ್ಲಿ ಸಾಗಿದ ಕಂಟೇನರ್ ಮುಂದೆ ಸಾಗುತ್ತಿದ್ದ ಹರೀಶ ಸಿದ್ದಿ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಹರೀಶ ಸಿದ್ದಿ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದು, ಕಂಟೇನರ್‌ನ ಹಿಂದಿನ ಚಕ್ರ ಅವರ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆದ್ದಾರಿಯ ಮೇಲೆ ರಕ್ತದ ಮಡುವಿನಲ್ಲಿ ಶವ ಬಿದ್ದಿರುವ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹಿಂದಿನಿಂದ ಬೈಕ್‌ನಲ್ಲಿ ಬರುತ್ತಿದ್ದ ಇಡಗುಂದಿಯ ಸೋನಾರಕೇರಿಯ ಸುರೇಶ ಗಣಪಾ ಸಿದ್ದಿ ಅವರು ಅಪಘಾತವನ್ನು ಕಣ್ಣಾರೆ ಕಂಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ಧರ್ಮೇಂದ್ರ ಕುಮಾರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share