Monday, September 7, 2026
Join WhatsApp Group
HomeCrimeಯಲ್ಲಾಪುರ | ವಿಘ್ನೇಶ್ವರನ ಅಂಕಿ ಆಟಕ್ಕೆ ವಿಘ್ನ

ಯಲ್ಲಾಪುರ | ವಿಘ್ನೇಶ್ವರನ ಅಂಕಿ ಆಟಕ್ಕೆ ವಿಘ್ನ

ಕೆನರಾ ನೆಕ್ಸ್ಟ್‌ ನ್ಯೂಸ್‌ ಡೆಸ್ಕ್

ಯಲ್ಲಾಪುರ: ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಯಲ್ಲಾಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲ್ಲಾಪುರ ತಾಲೂಕಿನ ತೇಲಂಗಾರ ಮಾರ್ಕೆಜಡ್ಡಿ ನಿವಾಸಿ ವಿಘ್ನೇಶ್ವರ ವೆಂಕಟ್ರಮಣ ನಾಯ್ಕ (39) ಪ್ರಕರಣದ ಆರೋಪಿಯಾಗಿದ್ದಾನೆ. ಆಗಸ್ಟ್‌ 28ರಂದು ಮಧ್ಯಾಹ್ನ ಸುಮಾರು 1.45ರ ವೇಳೆಗೆ ಇಡಗುಂದಿ ಗ್ರಾಮದ ಶ್ರೇಯಸ್ ಚಿಕನ್‌ ಸ್ಟಾಲ್ ಎದುರು ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು, ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಜನರಿಗೆ ಆಮಿಷವೊಡ್ಡಿ ಅಂಕಿ–ಸಂಖ್ಯೆಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಯಲ್ಲಾಪುರ ಪೊಲೀಸ್‌ ಠಾಣೆಯ ಪಿಎಸ್‌ಐ ರಾಜಶೇಖರ ವಂದಲಿ ಅವರು ಪಂಚರು ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದಾಗ ಆರೋಪಿಯ ಬಳಿಯಲ್ಲಿ 270 ರೂ ನಗದು, ಓಸಿ ಮಟಕಾ ಅಂಕಿ–ಸಂಖ್ಯೆಗಳನ್ನು ಬರೆದ ಒಂದು ಚೀಟಿ ಹಾಗೂ ಒಂದು ಬಾಲ್‌ಪೆನ್ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share