Thursday, October 22, 2026
HomeCrimeಅನುಮತಿ ಇಲ್ಲದೆ ಮದ್ಯಪಾನಕ್ಕೆ ಅವಕಾಶ: ಅಂಗಡಿ ಮಾಲೀಕನ ವಿರುದ್ಧ ಪ್ರಕರಣ

ಅನುಮತಿ ಇಲ್ಲದೆ ಮದ್ಯಪಾನಕ್ಕೆ ಅವಕಾಶ: ಅಂಗಡಿ ಮಾಲೀಕನ ವಿರುದ್ಧ ಪ್ರಕರಣ

ಯಲ್ಲಾಪುರ: ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಉಪಳೇಶ್ವರ ಗ್ರಾಮದ ಅಂಗಡಿ ಮಾಲೀಕನ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಉಪಳೇಶ್ವರ ಗ್ರಾಮದ ಗಣಪತಿ ನಾರಾಯಣ ಮರಾಠಿ (46) ಪ್ರಕರಣದ ಆರೋಪಿ. ಸೆ.30ರಂದು ಸಂಜೆ 5.55ರ ಸುಮಾರಿಗೆ ಉಪಳೇಶ್ವರ ಗ್ರಾಮದ ತಮ್ಮ ಗೂಡಂಗಡಿಯ ಮುಂದಿನ ತಾತ್ಕಾಲಿಕ ಶೆಡ್‌ನಲ್ಲಿ ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೆ ಮದ್ಯಪಾನಕ್ಕೆ ಅವಕಾಶ ಮಾಡಿಕೊಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ 90 ಎಂ.ಎಲ್. ಸಾಮರ್ಥ್ಯದ ಮದ್ಯ ತುಂಬಿದ ನಾಲ್ಕು ಪೌಚ್‌ಗಳು, ಎರಡು ಖಾಲಿ ಮದ್ಯದ ಪೌಚ್‌ಗಳು, ಎರಡು ಪ್ಲಾಸ್ಟಿಕ್ ಗ್ಲಾಸ್‌ಗಳು ಹಾಗೂ ಒಂದು ಲೀಟರ್ ಸಾಮರ್ಥ್ಯದ ಖಾಲಿ ನೀರಿನ ಬಾಟಲಿ ಪತ್ತೆಯಾಗಿವೆ ಎಂದು ಪ್ರಕರಣದ ದಾಖಲೆಯಲ್ಲಿ ನಮೂದಿಸಲಾಗಿದೆ.

ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುರೇಶ ಜಿ. ಕುಂಬಾರ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share