Friday, October 23, 2026
HomeLocal Newsಯಲ್ಲಾಪುರ | ಜೋಡಕೆರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ; ಶಾಸಕ ಹೆಬ್ಬಾರ್ ಭಾಗಿ

ಯಲ್ಲಾಪುರ | ಜೋಡಕೆರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ; ಶಾಸಕ ಹೆಬ್ಬಾರ್ ಭಾಗಿ

ಯಲ್ಲಾಪುರ: ಪಟ್ಟಣದ ಜೋಡಕೆರೆ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.

ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ, ವಿಷನ್ ಜನಪರ ಅಭಿವೃದ್ಧಿ ಟ್ರಸ್ಟ್, ಪಟ್ಟಣ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಜೋಡಕೆರೆ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ವಿಷನ್ ಸಂಸ್ಥೆಯ ಅಧ್ಯಕ್ಷ ವಿಜಯ ಮಿರಾಶಿ, ಕಾರ್ಯದರ್ಶಿ ಸತೀಶ ನಾಯ್ಕ, ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್‌ನ ಮುಖ್ಯಸ್ಥ ಶ್ರೀನಿವಾಸ ಮುರ್ಡೇಶ್ವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಆರ್.ಡಿ. ಜನಾರ್ದನ ಸೇರಿದಂತೆ ಪಟ್ಟಣ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share