Monday, September 7, 2026
Join WhatsApp Group
HomeLocal Newsಪತ್ನಿ ದೂರವಾದ ನೋವು; ಜೀವನಯಾನ ಮುಗಿಸಿದ ಕೂಲಿ ಕಾರ್ಮಿಕ

ಪತ್ನಿ ದೂರವಾದ ನೋವು; ಜೀವನಯಾನ ಮುಗಿಸಿದ ಕೂಲಿ ಕಾರ್ಮಿಕ

ಯಲ್ಲಾಪುರ: ಮದ್ಯದ ಚಟದಿಂದ ಉಂಟಾದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಪತ್ನಿ ದೂರವಾದ ನೋವನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲ್ಲಾಪುರ ಪಟ್ಟಣದ ರವೀಂದ್ರನಗರದಲ್ಲಿ ನಡೆದಿದೆ.

ಮೃತನನ್ನು ಕೂಲಿ ಕಾರ್ಮಿಕ ಸಂತೋಷ ಮನೋಹರ ಪಾಟೀಲ (47) ಎಂದು ಗುರುತಿಸಲಾಗಿದೆ.

ಮೃತನ ಸಹೋದರ ಶ್ರೀಕಾಂತ ಮನೋಹರ ಪಾಟೀಲ ನೀಡಿದ ದೂರಿನ ಪ್ರಕಾರ, ಸಂತೋಷ ಅವರಿಗೆ ಮದ್ಯಪಾನದ ಚಟವಿದ್ದು, ಮದ್ಯ ಸೇವಿಸಿ ಪತ್ನಿ ಅನುಷಾ ಅವರೊಂದಿಗೆ ಪದೇ ಪದೇ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತು ಪತ್ನಿ ಅವರನ್ನು ಬಿಟ್ಟು ಹೋಗಿದ್ದರು.

ಪತ್ನಿ ದೂರವಾದ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡ ಸಂತೋಷ, ಜೂನ್ 26ರ ಬೆಳಗ್ಗೆ 7 ಗಂಟೆಯಿಂದ ಜೂನ್ 27ರ ಬೆಳಗ್ಗೆ 9.45 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಮಹಾವೀರ ಕಾಂಬಳೆ ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share