Friday, July 24, 2026
Join WhatsApp Group
HomeCrimeಅನಾರೋಗ್ಯ: ಜೀವನ ಯಾನ ಮುಗಿಸಿದ ವ್ಯಕ್ತಿ

ಅನಾರೋಗ್ಯ: ಜೀವನ ಯಾನ ಮುಗಿಸಿದ ವ್ಯಕ್ತಿ

ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಾರದಾಗಳ್ಳಿ ನಿವಾಸಿ ಅಜೀಜ್ (38) ಮೃತ ವ್ಯಕ್ತಿಯಾಗಿದ್ದು, ಕಳೆದ ಒಂದು ವರ್ಷದ ಹಿಂದೆ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿ ಯಲ್ಲಾಪುರ, ಹುಬ್ಬಳ್ಳಿ ಹಾಗೂ ಗೋವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಆರೋಗ್ಯದಲ್ಲಿ ಸಮರ್ಪಕ ಸುಧಾರಣೆ ಕಂಡುಬಾರದ ಹಿನ್ನೆಲೆಯಲ್ಲಿ ಅವರು ಮಾನಸಿಕವಾಗಿ ಬೇಸರಗೊಂಡಿದ್ದರು.

ಮೇ 1ರ ಮಧ್ಯಾಹ್ನದಿಂದ ಮೇ 2ರ ಬೆಳಿಗ್ಗೆಯೊಳಗಿನ ಅವಧಿಯಲ್ಲಿ ಕೆ.ಮಿಲಾನ್ ಹೋಟೆಲ್ ಸಮೀಪದ ಖಾಲಿ ಜಾಗದಲ್ಲಿರುವ ಮಾವಿನ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಮೃತನ ಸಹೋದರ ಮಹಮ್ಮದ್ ಹುಸೇನ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನಲ್ಲಿ ಯಾವುದೇ ಅನುಮಾನ ಇಲ್ಲವೆಂದು ತಿಳಿಸಲಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share