Sunday, September 6, 2026
Join WhatsApp Group
HomeLocal Newsವಾಹನ ಓಡಿಸಿದ ಅಪ್ರಾಪ್ತ; ಮಾಲೀಕನಿಗೆ 25 ಸಾವಿರ ರೂ ದಂಡ

ವಾಹನ ಓಡಿಸಿದ ಅಪ್ರಾಪ್ತ; ಮಾಲೀಕನಿಗೆ 25 ಸಾವಿರ ರೂ ದಂಡ

ಯಲ್ಲಾಪುರ: ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ಯಲ್ಲಾಪುರದ ಜೆಎಂಎಫ್‌ಸಿ ನ್ಯಾಯಾಲಯ 25 ಸಾವಿರ ರೂ ದಂಡ ವಿಧಿಸಿದೆ.

Cr.No.23/2026ರ ಪ್ರಕರಣದಲ್ಲಿ ದಾಂಡೇಲಿವಾಡ ಕಿರವತ್ತಿ ನಿವಾಸಿ ಸೋನು ಸತ್ತು ಬಿಚುಕುಳೆ ಎಂಬಾತನ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 199(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಯಲ್ಲಾಪುರದ ಮಾನ್ಯ ಜೆಎಂಎಫ್‌ಸಿ ನ್ಯಾಯಾಧೀಶರಾದ ಅನಿತಾಕುಮಾರಿ ಎಸ್ ಅವರು ಆರೋಪಿಗೆ 25 ಸಾವಿರ ರೂ ದಂಡ ವಿಧಿಸುವುದರ ಜೊತೆಗೆ, ಈ ದಿನ ಸಂಜೆ 5 ಗಂಟೆಯವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಅಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ನೀಡುವುದು ಕಾನೂನುಬದ್ಧವಾಗಿ ಗಂಭೀರ ಅಪರಾಧವಾಗಿದ್ದು, ಪೋಷಕರು ಹಾಗೂ ವಾಹನ ಮಾಲೀಕರು ಮಕ್ಕಳಿಗೆ ವಾಹನ ನೀಡುವ ಮುನ್ನ ಎಚ್ಚರಿಕೆ ವಹಿಸುವ ಅಗತ್ಯವಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share