Monday, September 7, 2026
Join WhatsApp Group
HomeCrimeಜೈಲು ಸೇರಿದ ಗಾಂಜಾ ಅಜ್ಜ

ಜೈಲು ಸೇರಿದ ಗಾಂಜಾ ಅಜ್ಜ

ಯಲ್ಲಾಪುರ: ತಾಲೂಕಿನ ದೊಡ್ಡಯಲವಳ್ಳಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯಲ್ಲಾಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, ಸುಮಾರು ₹50 ಸಾವಿರ ಮೌಲ್ಯದ 860 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ದೊಡ್ಡಯಲವಳ್ಳಿ ಗ್ರಾಮದ ನಿವಾಸಿ ಬಯ್ಯಾ ವಾಗು ಕೋಕರೆ (64) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 860 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಯಲ್ಲಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಮೇಶ ಹಾನಾಪುರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಪಿಎಸ್‌ಐ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ, ಶೇಡಜಿ ಚವ್ಹಾಣ, .ಎಸ್.ಐ ಶರಣಬಸವ ಎಸ್.ಎ., ಎಎಸ್ಐ ದೀಪಕ ಸೋಮವಂಶಿ, ಉಮೇಶ ತುಂಬರಗಿ, ಸಿಪಿಸಿ ಸಂತೋಷ ಬಾಳೇರ, ಸುರೇಶ ಕಂಟ್ರಾಕ್ಟರ್, ಬಸವರಾಜ ಡಿ.ಕೆ, ಕೆ.ಹೆಚ್. ಮಾರುತಿ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಪ್ರಕರಣವನ್ನು ಯಶಸ್ವಿಯಾಗಿ ಪತ್ತೆಹಚ್ಚಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಯುವಜನತೆ ಮಾದಕ ವ್ಯಸನಗಳಿಂದ ದೂರವಿರಬೇಕು ಹಾಗೂ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಮಾರಾಟದ ಕುರಿತು ಮಾಹಿತಿ ಇದ್ದಲ್ಲಿ ಪೊಲೀಸರಿಗೆ ನೀಡುವಂತೆ ಕೋರಿದ್ದಾರೆ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share