ಯಲ್ಲಾಪುರ: ಸಹೋದ್ಯೋಗಿಗಳೊಂದಿಗೆ ಬೆರೆತು ಸೇವೆ ಸಲ್ಲಿಸುತ್ತಿದ್ದ ಯಲ್ಲಾಪುರ ಪೊಲೀಸ್ ಠಾಣೆಯ ಎಎಸ್‌ಐ ನೀಲಕಂಠ ಆಚಾರಿ (55) ಅವರ ಅಕಾಲಿಕ ನಿಧನ ಪೊಲೀಸ್ ಇಲಾಖೆಯಲ್ಲಿ ದುಃಖದ ಛಾಯೆ ಮೂಡಿಸಿದೆ.
ಮೂಲತಃ ಕಾರವಾರ ತಾಲೂಕಿನ ಅಮದಳ್ಳಿ ಗ್ರಾಮದವರಾದ ನೀಲಕಂಠ ಆಚಾರಿ ಅವರು ಕಳೆದ ಎರಡು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ.
ಯಲ್ಲಾಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಶೋಕ ವ್ಯಕ್ತವಾಗಿದೆ. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದು, ನೀಲಕಂಠ ಆಚಾರಿ ಅವರ ಸೇವೆ ಹಾಗೂ ಕರ್ತವ್ಯನಿಷ್ಠೆಯನ್ನು ಸ್ಮರಿಸಿದ್ದಾರೆ.
ಅವರ ನಿಧನದಿಂದ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.