Friday, October 23, 2026
HomeLocal Newsನಡೆಯದ ಯಲ್ಲಾಪುರ ಲ್ಯಾಂಪ್ಸ್ ಸೊಸೈಟಿ ಸಭೆ; ಸದಸ್ಯರಲ್ಲಿ ಅನುಮಾನ!

ನಡೆಯದ ಯಲ್ಲಾಪುರ ಲ್ಯಾಂಪ್ಸ್ ಸೊಸೈಟಿ ಸಭೆ; ಸದಸ್ಯರಲ್ಲಿ ಅನುಮಾನ!

ಯಲ್ಲಾಪುರ: ಸಿದ್ದಿ ಸಮುದಾಯದ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಸ್ಥಾಪನೆಯಾಗಿರುವ ಯಲ್ಲಾಪುರದ ಸಹ್ಯಾದ್ರಿ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶಗಳ ಸಹಕಾರಿ ಸಂಘದ ಸರ್ವ ಸಾಧಾರಣ ಸಭೆ ನಿಗದಿತ ದಿನದಂದು ನಡೆಯದಿರುವುದು ಸದಸ್ಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸರ್ಕಾರಿ ನಿಯಮಾವಳಿಯಂತೆ ಪ್ರತಿವರ್ಷ ನಡೆಸಬೇಕಾದ ಸರ್ವ ಸಾಧಾರಣ ಸಭೆಯನ್ನು ಸೆ.24ರಂದು ಯಲ್ಲಾಪುರದ ವೆಂಕಟರಮಣ ಮಠದಲ್ಲಿ ನಡೆಸಲು ಸಂಘದ ಆಡಳಿತ ಮಂಡಳಿ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಸದಸ್ಯರಿಗೆ ಸಭೆಯ ಕರೆಯೋಲೆಯನ್ನೂ ನೀಡಲಾಗಿತ್ತು.

ಅದರಂತೆ ಸಭೆಗೆ ಆಗಮಿಸಿದ ಸದಸ್ಯರಿಗೆ ಆಡಳಿತ ಮಂಡಳಿಯ ಸದಸ್ಯರು ಸ್ಥಳದಲ್ಲಿ ಇಲ್ಲದಿರುವುದು ಕಂಡುಬಂದಿದ್ದು, ಸಭೆ ನಡೆಯದೆ ವಾಪಸ್ ತೆರಳುವಂತಾಯಿತು.ಸಭೆ ನಡೆಯುವುದಿಲ್ಲ ಎಂಬ ಮಾಹಿತಿಯನ್ನು ಪೂರ್ವಭಾವಿಯಾಗಿ ಸದಸ್ಯರಿಗೆ ತಿಳಿಸದಿರುವುದು ಕೂಡ ಆಡಳಿತ ಮಂಡಳಿಯ ಕಾರ್ಯವೈಖರಿ ಕುರಿತು ಪ್ರಶ್ನೆ ಮೂಡಿಸಿದೆ ಎಂದು ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಿಗದಿತ ಸಭೆ ನಡೆಯದ ಬಳಿಕವೂ ಮುಂದಿನ ಸಭೆಯ ಕುರಿತು ಯಾವುದೇ ಸ್ಪಷ್ಟ ಮಾಹಿತಿ ನೀಡದಿರುವುದು ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿದೆ. ಸಂಘದ ಆಡಳಿತ ಮಂಡಳಿಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸದಸ್ಯರಲ್ಲಿ ಅನುಮಾನ ಮೂಡಿದ್ದು, ಸಂಘದ ಆಡಳಿತ ಹಾಗೂ ಆರ್ಥಿಕ ವ್ಯವಹಾರಗಳ ಕುರಿತು ಸಹಕಾರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಸಂಘದ ಆರ್ಥಿಕ ಪರಿಸ್ಥಿತಿ, ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ಸರ್ವ ಸಾಧಾರಣ ಸಭೆ ನಡೆಸದಿರುವುದಕ್ಕೆ ಕಾರಣವೇನು ಎಂಬುದನ್ನು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ, ಸಂಘದ ಸದಸ್ಯರಿಗೆ ವಾಸ್ತವಾಂಶವನ್ನು ತಿಳಿಸಬೇಕು ಎಂದು ಶೇರುದಾರ ಸದಸ್ಯರು ಆಗ್ರಹಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share