Monday, September 7, 2026
Join WhatsApp Group
HomeLocal Newsಬೆಂಬಿಡದ ವಿಧಿ; ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಬಿಡದ ವಿಧಿ; ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಯಲ್ಲಾಪುರ: ಸ್ಕೂಟಿ ಸ್ಕಿಡ್‌ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ವಾರದ ಕಾಲ ಚಿಕಿತ್ಸೆ ಪಡೆದರೂ ಬದುಕುಳಿಯದೇ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಂಡೇಲಿಯ ಗಾಂಧಿನಗರ ನಿವಾಸಿಗಳಾದ ಸಾವಂತಕುಮಾರ ಬಸಪ್ಪ ಬೋವಿವಡ್ಡರ ಹಾಗೂ ಅವರ ಪತ್ನಿ ಲಕ್ಷ್ಮಿ ಬೋವಿವಡ್ಡರ ಜುಲೈ 6ರಂದು ಕೆಲಸದ ನಿಮಿತ್ತ ಚಿಕ್ಕಮಗಳೂರಿನ ಕೊಪ್ಪಕ್ಕೆ ಸ್ಕೂಟಿಯಲ್ಲಿ ತೆರಳಿದ್ದರು. ಕೆಲಸ ಮುಗಿಸಿ ಜುಲೈ 7ರಂದು ರಾತ್ರಿ ಶಿರಸಿ–ಉಮ್ಮಚಗಿ ಮಾರ್ಗವಾಗಿ ವಾಪಸ್ಸಾಗುತ್ತಿದ್ದ ವೇಳೆ, ಯಲ್ಲಾಪುರ ತಾಲೂಕಿನ ಉಮ್ಮಚಗಿ ಸಮೀಪ ಸ್ಕೂಟಿ ಸ್ಕಿಡ್‌ ಆಗಿ ಅಪಘಾತಕ್ಕೊಳಗಾಗಿದ್ದರು.

ಅಪಘಾತದಲ್ಲಿ ಹಿಂಬದಿ ಕುಳಿತಿದ್ದ ಲಕ್ಷ್ಮಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಸಾರ್ವಜನಿಕರ ನೆರವಿನಿಂದ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 14ರಂದು ಸಂಜೆ ಲಕ್ಷ್ಮಿ ಅವರು ಮೃತಪಟ್ಟಿದ್ದಾರೆ.

ಈ ಸಂಬಂಧ ವಾಹನವನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಆರೋಪದಡಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share