Monday, September 7, 2026
Join WhatsApp Group
HomeLocal Newsಶಿಡ್ಲಗುಂಡಿ ಬಸ್ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹೆಬ್ಬಾರ್

ಶಿಡ್ಲಗುಂಡಿ ಬಸ್ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹೆಬ್ಬಾರ್

ಯಲ್ಲಾಪುರ: ಮುಂಡಗೋಡ ತಾಲೂಕಿನ ಶಿಡ್ಲಗುಂಡಿಯಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದವರನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರ ಆರೋಗ್ಯ ಸ್ಥಿತಿ ಹಾಗೂ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಶಾಸಕರು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸೂಕ್ತ ಆರೈಕೆ ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.

ಅಪಘಾತದ ಹಿನ್ನೆಲೆಯಲ್ಲಿ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ವೈದ್ಯಕೀಯ ಸಿಬ್ಬಂದಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share