Thursday, October 22, 2026
HomeLocal Newsಯಲ್ಲಾಪುರ | ಸ್ವರ್ಣ ಜ್ಯುವೆಲ್ಲರ್ಸ್ ಗ್ರಾಹಕರ ಮನ ಗೆದ್ದಿದೆ

ಯಲ್ಲಾಪುರ | ಸ್ವರ್ಣ ಜ್ಯುವೆಲ್ಲರ್ಸ್ ಗ್ರಾಹಕರ ಮನ ಗೆದ್ದಿದೆ

ಯಲ್ಲಾಪುರ: ಗ್ರಾಹಕರ ವಿಶ್ವಾಸಕ್ಕೆ ಹೆಸರಾದ ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್ ವತಿಯಿಂದ ದಸರಾ ಹಬ್ಬದ ಸಂದರ್ಭದಲ್ಲಿ ಯಲ್ಲಾಪುರದಲ್ಲಿ ಬಂಗಾರ ಹಾಗೂ ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಿರುವುದು ಶ್ಲಾಘನೀಯ ಎಂದು ಉದ್ಯಮಿ ಹಾಗೂ ಯುವ ಮುಖಂಡ ಬಾಲಕೃಷ್ಣ ನಾಯಕ್ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಶ್ರೀ ವೆಂಕಟರಮಣ ಮಠದ ಸಭಾಭವನದಲ್ಲಿ ಅ.11ರಿಂದ 14ರವರೆಗೆ ನಾಲ್ಕು ದಿನಗಳ ಕಾಲ ನಡೆಯುವ ಆಭರಣ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್ ಸಂಸ್ಥೆ ದೀರ್ಘ ಇತಿಹಾಸ ಹೊಂದಿದ್ದು, ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಬಂಗಾರದ ಆಭರಣಗಳ ಶೋರೂಮ್‌ಗಳನ್ನು ಹೊಂದಿದೆ. ಆರಂಭದಿಂದಲೂ ಗ್ರಾಹಕರ ವಿಶ್ವಾಸ ಗಳಿಸಿರುವ ಸಂಸ್ಥೆ ತನ್ನ ಗುಣಮಟ್ಟ ಮತ್ತು ನಂಬಿಕೆಯಿಂದ ಜನರ ಮನ ಗೆದ್ದಿದೆ ಎಂದು ಬಾಲಕೃಷ್ಣ ನಾಯಕ್ ಹೇಳಿದರು.

ಕಾರ್ಯಕ್ರಮದಲ್ಲಿ ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್ ಮಾಲೀಕ ಗೋಪಾಲಕೃಷ್ಣ ನಾಯಕ್, ಯಲ್ಲಾಪುರದ ರಾಮಾ ಸ್ಟೋರ್ಸ್ ಮಾಲೀಕ ಮಾರುತಿ ನಾಯಕ್, ಸಂಸ್ಥೆಯ ಹುಬ್ಬಳ್ಳಿ ವಿಭಾಗದ ವಿಭಾ ನಾಯಕ್ ಹಾಗೂ ದೇವಸ್ಥಾನದ ಅರ್ಚಕ ಪ್ರಮೋದ್ ಭಟ್ ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share