Friday, October 23, 2026
HomeLocal Newsಮತ್ತೆ ಪ್ರವಾಸಿಗರಿಗೆ ಮುಕ್ತವಾದ ಯಲ್ಲಾಪುರದ ತಾಣಗಳು

ಮತ್ತೆ ಪ್ರವಾಸಿಗರಿಗೆ ಮುಕ್ತವಾದ ಯಲ್ಲಾಪುರದ ತಾಣಗಳು

ಯಲ್ಲಾಪುರ: ಮಳೆಗಾಲದ ತೀವ್ರತೆ ಇದೀಗ ಕಡಿಮೆಯಾಗಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಈ ಹಿನ್ನೆಲೆಯಲ್ಲಿ ಯಲ್ಲಾಪುರ ವಿಭಾಗದ ಪ್ರಮುಖ ಪ್ರವಾಸಿ ತಾಣಗಳಿಗೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಭೇಟಿ ನೀಡಲು ವಿಧಿಸಲಾಗಿದ್ದ ನಿರ್ಬಂಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಲಾಗಿದೆ.

ಮಳೆಗಾಲದಲ್ಲಿ ಜಲಪಾತಗಳ ನೀರಿನ ಹರಿವು ಹೆಚ್ಚಾಗಿದ್ದಲ್ಲದೆ, ಕೆಲವೆಡೆ ಗುಡ್ಡಕುಸಿತದ ಭೀತಿಯೂ ಇದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಯಲ್ಲಾಪುರ, ಇಡಗುಂದಿ ಹಾಗೂ ಮುಂಡಗೋಡ ವಲಯಗಳ ಪ್ರಮುಖ ಪ್ರವಾಸಿ ತಾಣಗಳಿಗೆ ಜೂನ್ 3ರಿಂದ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದೀಗ ನಿರ್ಬಂಧ ತೆರವುಗೊಂಡಿರುವ ಪ್ರವಾಸಿ ತಾಣಗಳಲ್ಲಿ ಸಾತೊಡ್ಡಿ ಫಾಲ್ಸ್, ಮಾಗೋಡ ಫಾಲ್ಸ್, ಲಾಲಗುಳಿ ಫಾಲ್ಸ್, ಕಾಳಿ ನದಿ ತೂಗು ಸೇತುವೆ, ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಜೇನುಕಲ್ಲು ಗುಡ್ಡ, ಸೂರ್ಯ ಕಲ್ಯಾಣಿ ಗುಡ್ಡ ಹಾಗೂ ಅತ್ತಿವೇರಿ ಪಕ್ಷಿಧಾಮ ಸೇರಿದಂತೆ ಇತರ ಸ್ಥಳಗಳು ಸೇರಿವೆ.

ಪ್ರವಾಸಿಗರು ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಮುಂದುವರಿದಿದ್ದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಬಿಜೆಪಿ ಮುಖಂಡರು ಈ ಹಿಂದೆ ಆಕ್ಷೇಪ ವ್ಯಕ್ತಪಡಿಸಿದ್ದರು. ಒಂದು ವಾರದೊಳಗೆ ನಿರ್ಬಂಧ ತೆರವುಗೊಳಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಮಂಡಲ ಉಪಾಧ್ಯಕ್ಷ ಗಣೇಶ ಹೆಗಡೆ ಎಚ್ಚರಿಕೆ ನೀಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share