Monday, September 7, 2026
Join WhatsApp Group
HomeCrimeಯಲ್ಲಾಪುರದಲ್ಲಿ ಸಿಕ್ಕಿಬಿದ್ದ ಗಾಂಜಾವಾಲಾಗಳು

ಯಲ್ಲಾಪುರದಲ್ಲಿ ಸಿಕ್ಕಿಬಿದ್ದ ಗಾಂಜಾವಾಲಾಗಳು

ಯಲ್ಲಾಪುರ: ಪಟ್ಟಣದ ಎರಡು ಪ್ರತ್ಯೇಕ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಇಬ್ಬರನ್ನು ಯಲ್ಲಾಪುರ ಪೊಲೀಸರು ಪತ್ತೆಹಚ್ಚಿದ್ದು, ಇಬ್ಬರ ವಿರುದ್ಧವೂ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆ.11ರಂದು ಮಧ್ಯಾಹ್ನ ಯಲ್ಲಾಪುರ–ಕಿರವತ್ತಿ ರಸ್ತೆಯ ಜಮಗುಳಿ ಬಸ್ ನಿಲ್ದಾಣದ ಸಮೀಪ ಗಾಂಜಾ ಸೇವನೆಯ ಅಮಲಿನಲ್ಲಿದ್ದ ಉತ್ತರ ಪ್ರದೇಶ ಮೂಲದ, ಸದ್ಯ ಕೋಳಿಕೇರಿಯಲ್ಲಿ ವಾಸವಾಗಿರುವ ಚಾಲಕ ಶಾಹೀದ್ ಅಲಿ ಬೈತುಲ್ಲಾಹ ಖಾನ್ (30) ಪೊಲೀಸರ ಕೈಗೆ ಸಿಕ್ಕಿದ್ದಾನೆ. ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಪಿಎಸ್‌ಐ ರಾಜಶೇಖರ ವಂದಲಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಇದೇ ದಿನ ಸಂಜೆ 5.30ರ ಸುಮಾರಿಗೆ ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪವೂ ಗಾಂಜಾ ಅಮಲಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪತ್ತೆಯಾಗಿದ್ದಾನೆ. ಮಾದನಸರ ನಿವಾಸಿ, ಕೂಲಿ ಕಾರ್ಮಿಕ ಹಜರತಅಲಿ ಸೈಯದ್ ಸಾಬ್ ಜಂಡೇವಾಲೆ (29) ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಸಿದ್ದಪ್ಪ ಗುಡಿ ಅವರ ದೂರಿನ ಆಧಾರದ ಮೇಲೆ ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share