Monday, September 7, 2026
Join WhatsApp Group
HomeLocal Newsನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಇಂಧನ ದರ ಏರಿಕೆ ಖಂಡಿಸಿ ಮೇ. 22ಕ್ಕೆ ಪ್ರತಿಭಟನೆ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಇಂಧನ ದರ ಏರಿಕೆ ಖಂಡಿಸಿ ಮೇ. 22ಕ್ಕೆ ಪ್ರತಿಭಟನೆ

ಯಲ್ಲಾಪುರ: ದೇಶದಾದ್ಯಂತ ಚರ್ಚೆಗೆ ಕಾರಣವಾಗಿರುವ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್‌, ಡೀಸೆಲ್‌ ಬೆಲೆಗಳನ್ನು ಖಂಡಿಸಿ ಯುವ ಕಾಂಗ್ರೆಸ್ ತಾಲೂಕಾ ಸಮಿತಿ ಯಲ್ಲಾಪುರ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಯುವ ಕಾಂಗ್ರೆಸ್ ತಾಲೂಕಾ ಸಮಿತಿ ಅಧ್ಯಕ್ಷ ಗಣೇಶ ಹೆಗಡೆ ಪಣತಗೇರಿ ಪ್ರಕಟಣೆ ನೀಡಿದ್ದು, ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಇಂಧನ ದರ ಏರಿಕೆಯಿಂದ ಜನಸಾಮಾನ್ಯರು ತೀವ್ರ ಆರ್ಥಿಕ ಹೊರೆ ಅನುಭವಿಸುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಮೇ 22ರಂದು ಬೆಳಿಗ್ಗೆ 10 ಗಂಟೆಗೆ ಯಲ್ಲಾಪುರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share