Friday, July 24, 2026
Join WhatsApp Group
HomeStateಯೋಗಿ ಆದಿತ್ಯನಾಥ್‌ ತಾಯಿಗೆ ಅವಹೇಳನ

ಯೋಗಿ ಆದಿತ್ಯನಾಥ್‌ ತಾಯಿಗೆ ಅವಹೇಳನ

ಮೌಲಾನಾ ವಿರುದ್ಧ ಎಫ್‌ಐಆರ್‌, ರಾಜ್ಯಾದ್ಯಂತ ಆಕ್ರೋಶ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶದಾದ್ಯಂತ ಭಾರಿ ವಿವಾದ ಉಂಟಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷರು ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಸುಮಾರು 83 ಪೊಲೀಸ್ ಠಾಣೆಗಳಲ್ಲಿ ಮೌಲಾನಾ ವಿರುದ್ಧ ದೂರುಗಳು ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ.

ರಾಜಧಾನಿ ಲಖನೌ ನಗರದ ಹಜ್ರತ್‌ಗಂಜ್‌ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ “ಯೋಗಿಜಿಯ ತಾಯಿಯ ಅವಮಾನವನ್ನು ಹಿಂದೂ ಸಮಾಜ ಸಹಿಸುವುದಿಲ್ಲ” ಎಂಬ ಬರಹವಿರುವ ದೊಡ್ಡ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ.

ಈ ನಡುವೆ ನೂರಾರು ಯುವಕರು ಅಟಲ್‌ ಚೌಕ್‌ನಲ್ಲಿ ಜಮಾಯಿಸಿ ಮೌಲಾನಾ ಅಬ್ದುಲ್ಲಾ ಸಲೀಂ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಪ್ರಸ್ತುತ ಪೊಲೀಸರು ಪ್ರಕರಣದ ತನಿಖೆಯನ್ನು ವೇಗಗೊಳಿಸಿದ್ದು, ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share