Friday, July 24, 2026
Join WhatsApp Group
HomeCrimeಮನನೊಂದು ಯುವಕ ಆತ್ಮಹತ್ಯೆ

ಮನನೊಂದು ಯುವಕ ಆತ್ಮಹತ್ಯೆ

ಯಲ್ಲಾಪುರ: ತಾಲೂಕಿನ ಸುಣಜೋಗ ಗ್ರಾಮದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮೃತರನ್ನು ದಯಾನಂದ ನಾಗಪ್ಪ ಸಿದ್ದಿ (20) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನಲ್ಲಿ ಹೋಮ್‌ ನರ್ಸಿಂಗ್‌ ಕೆಲಸ ಮಾಡುತ್ತಿದ್ದು, ಸುಮಾರು ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದರು.

ತಂದೆ ನಾಗಪ್ಪ ಸುಬ್ಬಾ ಸಿದ್ದಿ ನೀಡಿದ ಮಾಹಿತಿಯ ಪ್ರಕಾರ, ದಯಾನಂದ ಇತ್ತೀಚೆಗೆ ಮಾನಸಿಕವಾಗಿ ನೊಂದುಕೊಂಡಿದ್ದ. ಮೇ 27ರ ಮಧ್ಯಾಹ್ನದಿಂದ ಮೇ 28ರ ಬೆಳಿಗ್ಗೆ ನಡುವಿನ ಅವಧಿಯಲ್ಲಿ ಮನೆಯಲ್ಲಿ ನೈಲಾನ್‌ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share