Friday, July 24, 2026
Join WhatsApp Group
HomeLocal Newsಕಾರವಾರಕ್ಕೂ ಬರಲಿದೆ ʻವಂದೇ ಭಾರತ್ʼ ರೈಲು!

ಕಾರವಾರಕ್ಕೂ ಬರಲಿದೆ ʻವಂದೇ ಭಾರತ್ʼ ರೈಲು!

ದಾಂಡೇಲಿ: ಬೆಂಗಳೂರಿನಿoದ ಮಂಗಳೂರುವರೆಗೆ ಸಂಚರಿಸಲು ಉದ್ದೇಶಿಸಿರುವ  ವಂದೇ ಭಾರತ್ ರೈಲನ್ನು ಕಾರವಾರದವರೆಗೂ ವಿಸ್ತರಿಸಲು ಪ್ರಯತ್ನಿಸಲಾಗುವುದು ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಅವರು ಶನಿವಾರ ದಾoಡೇಲಿ ರೈಲ್ವೆ ನಿಲ್ದಾಣದಲ್ಲಿ, ದಾoಡೇಲಿಯಿಂದ ಅಳ್ನಾವರದವರೆಗೆ ಸಂಚರಿಸುವ ನೂತನ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗವನ್ನು 17000  ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳುವ ಕುರಿತಂತೆ ಶೀಘ್ರದಲ್ಲಿ ಅಗತ್ಯವಿರುವ ಎಲ್ಲಾ ಅನುಮತಿ ದೊರೆಯಲಿದ್ದು, ಅಳ್ನಾವರ- ಡಾoಡೇಲಿ ರೈಲನ್ನು ಹುಬ್ಬಳ್ಳಿವರೆಗೂ ವಿಸ್ತರಿಸಲಾಗುವುದು ಎಂದರು.

ರಾಜ್ಯದಲ್ಲಿ 52,952 ಕೋಟಿ ವೆಚ್ಚದಲ್ಲಿ ರೈಲ್ವೆ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಸುಮಾರು 3,840 ಕಿ.ಮೀ ಹೊಸ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. 707 ಮೆಲ್ಸೇತುವೆ ಮತ್ತು ಕೆಳಸೇತುವೆ ಮಾಡಲಾಗಿದ್ದು, 61 ರೈಲ್ವೆ ನಿಲ್ದಾಣ ನವೀಕರಣ, ಹಲವು ರೈಲ್ವೆ ನಿಲ್ದಾಣಗಳನ್ನು ಉನ್ನತೀಕರಣ ಮಾಡಲಾಗುತ್ತದೆ. ರಾಜ್ಯದಲ್ಲಿ ಈ ಹಿಂದೆ ಸಂಚರಿಸುತ್ತಿದ್ದು ಪ್ರಸ್ತುತ ಸ್ಥಗಿತಗೋಂಡಿರುವ ರೈಲುಗಳನ್ನು ಆದ್ಯತೆಯ ಮೇರೆಗೆ ಪುನಾರಂಭ ಮಾಡಲಾಗುವುದು ಎಂದು ಹೇಳಿದರು.

ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ, ಹಿಂದೆ ರೈಲ್ವೆ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಪ್ರಯತ್ನದಿಂದ ಅಳ್ನಾವರ ಡಾಡೇಲಿ ರೈಲು ಆರಂಭಗೊಂಡಿದ್ದು, ಈ ರೈಲನ್ನು ನಿರಂತರವಾಗಿ ಓಡಾಟ ನಡೆಸುವ ಉದ್ದೇಶದಿಂದ ಈ ರೈಲನ್ನು ಹುಬ್ಬಳ್ಳಿ ಅಥವಾ ಬೆಳಗಾವಿ ಗೆ ಕನೆಕ್ಟಿವಿಟಿ ಮಾಡಬೇಕು.  ಭಾನುವಾರ ಕೂಡಾ ಚಲಿಸಲು ಅವಕಾಶ ನೀಡಬೇಕು. ಈ ಹಿಂದೆ ಸ್ಥಗಿತವಾಗಿದ್ದ  ಹುಬ್ಬಳ್ಳಿ -ಪಂಡಾರಪುರ  ನೇರ ರೈಲುಸೇವೆಯನ್ನು ಮತ್ತು ಸ್ಥಗಿತಗೊಂಡಿರುವ ಮಿರಜ್- ಕ್ಯಾಸಲ್ ರಾಕ್ ಪ್ರಯಾಣಿಕ ರೈಲು ಸೇವೆಯನ್ನು ಪುನರಾರಾಂಭಿಸಬೇಕು ಎಂದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಯ ಬಾಳಿನಲ್ಲಿ ನೆಮ್ಮದಿ ಮೂಡಿಸಿವೆ. ಶಕ್ತಿ ಮತ್ತು ಗೃಹಜ್ಯೋತಿ ಯೋಜನೆಗಳು ಮಹಿಳೆಯರು ಸಬಲರಾಗುವಂತೆ ಮಾಡಿವೆ. ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳು ಕೂಡಾ ಸಾರ್ವಜನಿಕರಿಗೆ ನೆರವಾಗಿದ್ದು, ಯುವನಿಧಿ ಯುವಜನತೆಗೆ ಉದ್ಯೋಗ ಪಡೆಯಲು ಸಹಕಾರಿಯಾಗಿವೆ ಎಂದರು. 

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ತಾಳಗುಪ್ಪ-ಶಿರಸಿ-ಮುಂಡಗೋಡ-ಹುಬ್ಬಳ್ಳಿ ರೈಲು ಮಾರ್ಗದ ಸರ್ವೇ ಕೆಲಸ ಆಗಿದ್ದು, ಡಿಪಿಆರ್ ಹಂತದಲ್ಲಿದೆ. ಡಾoಡೇಲಿ ರೈಲ್ವೆ ನಿಲ್ದಾಣಕ್ಕೆ ಸಾರಿಗೆ ಬಸ್ ವ್ಯವಸ್ಥೆ ಆಗಬೇಕು. ಜಿಲ್ಲೆಯಲ್ಲಿ ಕೇಂದ್ರ ಯೋಜನೆಗಳನ್ನು ಜನತೆಗೆ ಪಕ್ಷಾತೀತವಾಗಿ ತಲುಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ  ಸುನಿಲ್ ಹೆಗಡೆ, ರೂಪಾಲಿ ನಾಯ್ಕ, ಘೋಟ್ನೆಕರ್, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಹುಬ್ಬಳ್ಳಿ ವಿಭಾಗೀಯ  ರೈಲ್ವೆಯ ಮ್ಯಾನೇಜರ್ ಬೇಲಾಮೀನಾ, ಕೊಂಕಣ ರೈಲ್ವೆಯ  ವಿಭಾಗೀಯ ಮ್ಯಾನೇಜರ್ ಆಶಾ ಶೆಟ್ಟಿ,ಮುಖ್ಯ ವಾಣಿಜ್ಯ ಮ್ಯಾನೇಜರ್ ಎಸ್.ಪಿ. ಶಾಸ್ತ್ರಿ, ತಹಸೀಲ್ದಾರ್ ಶೈಲೇಶ್ ಪರಮಾನಂದ ಮತ್ತಿತರರು ಇದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share