Friday, July 24, 2026
Join WhatsApp Group
HomeLocal Newsಗ್ರಾ.ಪಂಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಲಿ

ಗ್ರಾ.ಪಂಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಲಿ

ಕಾರವಾರ: ಗ್ರಾಮ ಪಂಚಾಯಿತಿಗಳು ಸ್ಥಳಿಯ  ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ಕೇಂದ್ರಗಳಾಗಬೇಕು ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಮoಕಾಳ ಎಸ್ ವೈದ್ಯ  ಹೇಳಿದರು.

ಅವರು ಶುಕ್ರವಾರ ಹಿರೇಗುತ್ತಿ ಗ್ರಾಮ ಪಂಚಾಯಿತಿಯ ನೂತನ  ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಗ್ರಾಮದ ಜನತೆಯ ಸಮಸ್ಯೆಗಳನ್ನು ಗ್ರಾಮಗಳಲ್ಲಿಯೇ ಬಗೆಹರಿಸುವ ಉದ್ದೇಶದಿಂದ ಸರ್ಕಾರವು ಹಲವು ಸೇವೆಗಳನ್ನು ಪoಚಾಯತ್ ಮೂಲಕವೇ ನೀಡುತ್ತಿದೆ.  ಸಮಸ್ಯೆಗಳ ಪರಿಹಾರಕ್ಕೆ ಪoಚಾಯತ್‌ಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ತಾಳ್ಮೆಯಿಂದ ಆಲಿಸಿ, ಸ್ಪಂದಿಸಿ ಅವುಗಳನ್ನು ಬಗೆಹರಿಸಿಕೊಡಬೇಕು ಎಂದರು.

 ಶಾಸಕ ದಿನಕರ ಶೆಟ್ಟಿ ಮಾತನಾಡಿ, ಈ ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಜನರ ಬೇಡಿಕೆಗಳಿಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಲಾಗಿದ್ದು, ಈ ಭಾಗದ ಕಾಲೇಜಿನ ಕಟ್ಟಡಕ್ಕೂ ಅನುದಾನ ಒದಗಿಸಿದೆ ಎಂದರಲ್ಲದೆ, ಪಂಚಾಯತ್ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪoಚಾಯತ್ ಅಧ್ಯಕ್ಷರಾದ ನಾರಾಯಣ ನಾಯ್ಕ, ಉಪಾಧ್ಯಕ್ಷೆ ವೆಂಕಮ್ಮ ಹರಿಕoತ್ರ, ತಹಸೀಲ್ದಾರ್ ಕೃಷ್ಣ ಕಾಮಕರ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಭಟ್, ಪಂಚಾಯಿತಿಯ ಎಲ್ಲಾ ಸದಸ್ಯರು, ಸಾರ್ಇವಜನಿಕರು ಇದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share